HomeKarnatakaಮಧ್ಯವರ್ತಿ ಮೂಲಕ 3.5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

ಮಧ್ಯವರ್ತಿ ಮೂಲಕ 3.5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ

ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ಎಇಇ ಧನಂಜಯ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಯನಗರ ಬೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರನ್ನು ಬಂಧಿಸಲಾಗಿದೆ.

ಮಧ್ಯವರ್ತಿ ಸೈಯ್ಯದ್ ನದೀಮ್ ಮೂಲಕ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಎಲೆಕ್ಟ್ರಿಕ್ ಗುತ್ತಿಗೆದಾರ ಭರತ್ ಅವರ ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

22 ಕೆವಿ ವಿದ್ಯುತ್ ಲೈನ್ ಗಾಗಿ 13 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 3.5 ಲಕ್ಷ ರೂ. ಲಂಚ ಪಡೆಯುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಎಇಇ ಧನಂಜಯ ಮತ್ತು ಮಧ್ಯವರ್ತಿ ಸೈಯದ್ ನನ್ನು ಬಂಧಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular