HomeKarnatakaBIGG NEWS : ಜಾತಿ ನಿಂದನೆ ಆರೋಪ : 2ನೇ `FIR’ ರದ್ದು ಕೋರಿ ಹೈಕೋರ್ಟ್...

BIGG NEWS : ಜಾತಿ ನಿಂದನೆ ಆರೋಪ : 2ನೇ `FIR’ ರದ್ದು ಕೋರಿ ಹೈಕೋರ್ಟ್ ಗೆ ಉಪೇಂದ್ರ ಅರ್ಜಿ

ಬೆಂಗಳೂರು : ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ರದ್ದು ಮಾಡುವಂತೆ ಕೋರಿ ನಟ ಉಪೇಂದ್ರ ಹೈಕೋರ್ಟ್ ಗೆ 2 ನೇ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡುವಾಗ ಹೇಳಿದ್ದ ಗಾದೆ ಮಾತು ಪರಿಶಿಷ್ಟ ಜಾತಿಯ ಒಂದು ಸಮುದಾಯವನ್ನು ಕೆಟ್ಟವರು ಎಂಬುದಾಗಿ ಬಿಂಬಿಸುವಂತೆ ಬಳಸಲಾಗಿದೆ ಎನ್ನುವ ಆರೋಪದಲ್ಲಿ ನಟ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಎಫ್ ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಉಪೇಂದ್ರ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯ ಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು. ಇದರ ಬೆನ್ನಲ್ಲೇ ಎಫ್ ಐಆರ್ ರದ್ದು ಕೋರಿ ಎರಡನೇ ಅರ್ಜಿ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular