HomeKarnatakaBIG NEWS: ವಿದ್ಯಾರ್ಥಿಗಳ ಬಳಿ ಮಾರಕಾಸ್ತ್ರ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

BIG NEWS: ವಿದ್ಯಾರ್ಥಿಗಳ ಬಳಿ ಮಾರಕಾಸ್ತ್ರ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಮೈಸೂರು: ಮಕ್ಕಳು ಚೆನ್ನಾಗಿ ಓದಲೆಂದು ಪೋಷಕರು ಕಷ್ಟಪಟ್ಟು ದುಡಿದು, ಶಾಲಾ-ಕಾಲೇಜುಗಳಿಗೆ ಕಳುಹಿಸಿದರೆ ಕೆಲ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇಂತದ್ದೇ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದ್ದು, ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.

25 ವರ್ಷದ ಸಮರ್ಥ್ ಹಾಗೂ 19 ವರ್ಷದ ಉತ್ಸವ್ ಬಂಧಿತ ವಿದ್ಯಾರ್ಥಿಗಳು. ಬಂಧಿತರಿಂದ ಎರಡು ಲಾಂಗ್ ಹಾಗೂ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ನೇಹಿತರನ್ನು ಹೆದರಿಸಲು ಈ ವಿದಾರ್ಥಿಗಳು ಲಾಂಗ್ ಇಟ್ಟುಕೊಂಡು ಓಡಾಡುತ್ತಿದ್ದರು. ವಿದ್ಯಾರ್ಥಿಗಳ ವಿರುದ್ಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular