HomeKarnatakaLokayukta Raid : ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ‘ಲೋಕಾಯುಕ್ತ' : ಕೊಡಗು ಅಪರ ಜಿಲ್ಲಾಧಿಕಾರಿ...

Lokayukta Raid : ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ‘ಲೋಕಾಯುಕ್ತ’ : ಕೊಡಗು ಅಪರ ಜಿಲ್ಲಾಧಿಕಾರಿ ನಿವಾಸದಲ್ಲಿ ಕಂತೆ ಕಂತೆ ನೋಟು ಪತ್ತೆ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ 11.5 ಲಕ್ಷ ರೂಪಾಯಿ ನಗದು ಹಾಗೂ ಸಾಕಷ್ಟು ಚಿನ್ನಾಭರಣ ಪತ್ತೆಯಾಗಿದೆ. ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನೀಯರ್ ಕೆ.ಮಹೇಶ್ ನಿವಾಸದಲ್ಲಿ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ.

ಅದೇ ರೀತಿ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ಸಣ್ಣ ನೀರಾವರಿ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.ದಾವಣಗೆರೆಯ ಜಯನಗರದ ಮಹೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೀದರ್ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಕಾನ್ಸ್ ಟೇಬಲ್ ವಿಜಯ್ ಕುಮಾರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular