HomeKarnatakaಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23 ನೇ ಸಾಲಿನ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಕೇಂದ್ರ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮುರುಪಾವತಿಸುವ ಯೋಜನೆಯಡಿ ಅರ್ಹ ಕ್ರೀಡಾಪಟ್ಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಕ್ರಿಡಾಪಟುಗಳು ಅರ್ಜಿ ನಮೂನೆಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17&18, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು-01 ಇಲ್ಲಿ ಪಡೆದು ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 27 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 080-22239771, 7204266766 9480886545 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular