ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಅಡಿ ಖಾಲಿ ಹುದ್ದೆಗಳ ಭರ್ತಿಗೆ ಸಮರ್ಪಕ ಕ್ರಮ ಕೈಗೊಳ್ಳದ ಕಾರಣ ಖಾಲಿ ಹುದ್ದೆಗಳು, ಭಡ್ತಿ ಹುದ್ದೆಗಳು, ಭಡ್ತಿ ಬಳಿಕ ಖಾಲಿಯಾಗುವ ಹುದ್ದೆಗಳ ಸಂಪೂರ್ಣವಾಗಿ ಮಾಹಿತಿಯನ್ನು ಸೋಮವಾರದೊಳಗೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಉಪ ಸಮಿತಿ 7 ಸಭೆ ನಡೆಸಿದರೂ ಸಮರ್ಪಕವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಹೀಗಾಗಿ ಖಾಲಿ ಹುದ್ದೆ ಸಂಬಂಧ ವಿವಿಧ ಇಲಾಖೆಗಳ ಮಾಹಿತಿ ಮತ್ತು ಯೋಜನಾ ಇಲಾಖೆ ಮಾಹಿತಿಗೂ ವ್ಯತ್ಯಾಸವಿದ್ದು, ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಲು ಸೂಚಿಸಿದ್ದು, ಕಲ್ಯಾಣ ಕರ್ನಾಟಕ ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.