ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು. ಇದೀಗ ಮಾಜಿ ಸಿಎಂ ಒತ್ತಾಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ವಪಕ್ಷಗಳ ಸಭೆ ಕರೆಯಿರಿ ಎಂದು ಕುಮಾರಸ್ವಾಮಿ ಹೇಳಿರುವುದರಲ್ಲಿ ತಪ್ಪಿಲ್ಲ. ನಾವೂ ಕೂಡ ಸರ್ವಪಕ್ಷಗಳ ಸಭೆ ಕರೆಯುವ ಬಗ್ಗೆ ಆಲೋಚಿಸಿದ್ದೇವೆ ಎಂದರು.
ಕೇವಲ ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ, ಕೃಷ್ಣಾ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸುವ ಕುರಿತು ಚಿಂತನೆ ನಡೆಸಿದ್ದೇವೆ ಎಂದು ಹೇಳಿದರು.