ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಮಾಸಿಕ ಸಹಾಯಧನ ನೀಡುವ ಯುವನಿಧಿ ಯೋಜನೆಗೆ ನವೆಂಬರ್ ಕೊನೆಯ ವಾರದಲ್ಲಿ ಮೈಸೂರು ನಗರದಲ್ಲಿ ಚಾಲನೆ ನೀಡುವ ಬಗ್ಗೆ ಮೈಸೂರು ಜಿಲ್ಲೆ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ.
ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ನವೆಂಬರ್ ಕೊನೆ ವಾರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.
ಏನಿದು ಯುವನಿಧಿ ಯೋಜನೆ?
ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ.