
ಮಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಂತರ ಮೌಲ್ಯದ ಅಕ್ಕಿಯೇ ಮಾಯವಾಗಿರುವ ಘಟನೆ ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಈ ಘಟನೆ ನಡೆದಿದ್ದು, ಬರೋಬ್ಬರಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಪತ್ತೆಯಾಗಿದೆ.
ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಪಡಿತರ ಅಕ್ಕಿ ಅವ್ಯವಹಾರ ನಡೆದಿರುವುದು ಬಯಲಾಗಿದೆ. ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಹಾಗೂ ಗೋದಾಮು ನಿರ್ವಾಹಕ ವಿಜಯ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
		 
		 
		 
		 Loading ...
 Loading ... 
		 
		 
		