HomeKarnatakaBIG NEWS : ಆ.21 ರಿಂದ 'ದ್ವಿತೀಯ PUC' 2ನೇ ಪೂರಕ ಪರೀಕ್ಷೆ : ನಿಷೇಧಾಜ್ಞೆ...

BIG NEWS : ಆ.21 ರಿಂದ ‘ದ್ವಿತೀಯ PUC’ 2ನೇ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 21 ರಿಂದ ಸೆಪ್ಟೆಂಬರ್, 02 ರವರೆಗೆ ನಡೆಯುವ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular