ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 41 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.
ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 41 ಕೋಟಿ ದಾಟಿದೆ. ಮಹಿಳೆಯ ರನ್ನು ಆರ್ಥಿಕಸ್ವಾವಲಂಬಿಗಳನ್ನಾಗಿಸಲುಜಾರಿಗೆ ತರಲಾಗಿರುವಶಕ್ತಿ ಯೋಜನೆಯಶಸ್ವಿಯಾಗಿದೆ. ಆ ಮೂಲಕ ನಮ್ಮ ಉದ್ದೇಶ ಈಡೇರಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜೂ.11ರಂದು ಆರಂಭವಾದ ಶಕ್ತಿ ಯೋಜನೆಗೆ ರಾಜ್ಯದಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈವರೆಗೆ ಪ್ರತಿನಿತ್ಯ ಸರಾಸರಿ 60 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಿದ್ದಾರೆ. ಆ.17 ರವರೆಗೆ 41.33 ಕೋಟಿಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ ಶಕ್ತಿ ಯೋಜನೆಯಿಂದ ರಾಜ್ಯದ ಮುಜರಾಯಿ ದೇವಾಲಯಗಳ ಕಾಣಿಕೆ ಕೂಡ ಭರ್ತಿಯಾಗಿದ್ದು, ಸರ್ಕಾರಕ್ಕೆ ಭರ್ಜರಿ ಆದಾಯ ತಂದಿದೆ.