ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ನನ್ನು ಸ್ಥಳೀಯರು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಮಹೇಶ್ ಕುಮಾರ್ ಗುರ್ಜರ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ನಂತರ ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಅವರು ಹೇಳಿದರು.
ಈ ಬಗ್ಗೆ ವಿವಾಹಿತ ಮಹಿಳೆ ದೂರು ನೀಡಿದ ನಂತರ ಪರಾರಿಯಾಗಿರುವ ಗುರ್ಜರ್ ಮತ್ತು ಬಸ್ವಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಅವರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಕಾನ್ಸ್ಟೇಬಲ್ ಮಹೇಶ್ ಕುಮಾರ್ ಗುರ್ಜರ್ ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಒಬ್ಬಂಟಿಯಾಗಿದ್ದಾಗ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅವಳು ಕೂಗಿಕೊಂಡಾಗ ಆಕೆಯ ಕುಟುಂಬ ಸದಸ್ಯರು ಬಂದು ಆತನನ್ನು ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಬಂಡಿಕುಯಿ ಈಶ್ವರ್ ಸಿಂಗ್ ತಿಳಿಸಿದ್ದಾರೆ.