ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಮೂವರು ಸದಸ್ಯರ ಹೆಸರನ್ನು ಸಿಎಂ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ.
ಕೆ.ಪಿ.ಎಸ್.ಸಿ ಅಧ್ಯಕ್ಷಕರು, ಉಪಾಧ್ಯಕ್ಷರು, ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಇತ್ತೀಚೆಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಈ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ ಸದಸ್ಯರ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೀದರ್ ನ ಬಸವರಾಜ್ ಮಲ್ಗೆ, ಬೆಂಗಳೂರಿನ ಡಾ.ಆರ್.ಕಾವಾಲಮ್ಮ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್ ಹೆಚ್.ಎಸ್.ಭೋಜ್ಯ ನಾಯ್ಕ್ ಅವರ ಹೆಸರನ್ನು ಸಿಎಂ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.