HomeIndiaಗಮನಿಸಿ: ʼಆಧಾರ್ʼ ಕಾರ್ಡ್ ಹೊಂದಿರುವವರಿಗೆ ಯುಐಡಿಎಐ ನಿಂದ ಮಹತ್ವದ ಸೂಚನೆ

ಗಮನಿಸಿ: ʼಆಧಾರ್ʼ ಕಾರ್ಡ್ ಹೊಂದಿರುವವರಿಗೆ ಯುಐಡಿಎಐ ನಿಂದ ಮಹತ್ವದ ಸೂಚನೆ

ನವದೆಹಲಿ: ಇ-ಮೇಲ್, ವಾಟ್ಸಾಪ್ ಮೂಲಕ ಆಧಾರ್ ಕಾರ್ಡ್ ಅನ್ನು ನವೀಕರಿಸಲು ದಾಖಲೆಗಳನ್ನು ಹಂಚಿಕೊಳ್ಳಬೇಡಿ ಎಂದು ಯುಐಡಿಎಐ (ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ) ಎಚ್ಚರಿಕೆ ನೀಡಿದೆ.

ಮುನ್ನೆಚ್ಚರಿಕೆ ಕ್ರಮವಾಗಿ, ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸುವ ಉದ್ದೇಶದಿಂದ ತಮ್ಮ ಗುರುತಿನ ಅಥವಾ ವಿಳಾಸ ಪುರಾವೆ ದಾಖಲೆಗಳನ್ನು ಇಮೇಲ್ ಅಥವಾ ವಾಟ್ಸಾಪ್ ಮೂಲಕ ಹಂಚಿಕೊಳ್ಳದಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಜನರಿಗೆ ಎಚ್ಚರಿಕೆ ನೀಡಿದೆ. ಈ ರೀತಿ ತಮ್ಮ ದಾಖಲೆಗಳನ್ನು ಹಂಚಿಕೊಳ್ಳಲು ಯಾವುದೇ ವ್ಯಕ್ತಿಗೆ ಎಂದಿಗೂ ಕೇಳುವುದಿಲ್ಲ. ಇದರಿಂದ ಮೋಸ ಹೋಗುವ ಸಾಧ್ಯತೆಯಿದೆ ಎಂದು ಪ್ರಾಧಿಕಾರ ಹೇಳಿದೆ.

ಯುಐಡಿಎಐ ಪ್ರಮುಖ ದಾಖಲೆಗಳನ್ನು ಹಂಚಿಕೊಳ್ಳಲು ಎಂದಿಗೂ ಕೇಳುವುದಿಲ್ಲ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುಐಡಿಎಐ ನಿಮ್ಮ ಆಧಾರ್ ಅನ್ನು ಇಮೇಲ್ ಅಥವಾ ವಾಟ್ಸಾಪ್ ಮೂಲಕ ನವೀಕರಿಸಲು ನಿಮ್ಮ ದಾಖಲೆಗಳನ್ನು ಹಂಚಿಕೊಳ್ಳಲು ಎಂದಿಗೂ ಕೇಳುವುದಿಲ್ಲ. #myAadhaarPortal ಮೂಲಕ ಆನ್‌ಲೈನ್‌ನಲ್ಲಿ ನಿಮ್ಮ ಆಧಾರ್ ಅನ್ನು ನವೀಕರಿಸಿ ಅಥವಾ ನಿಮ್ಮ ಸಮೀಪದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದು.

ಕಳೆದ ವರ್ಷದ ಆರಂಭದಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ಜನರು ತಮ್ಮ ಆಧಾರ್ ಕಾರ್ಡ್‌ಗಳ ಫೋಟೊಕಾಪಿಗಳನ್ನು ಯಾವುದೇ ಸಂಸ್ಥೆಗಳೊಂದಿಗೆ ಹಂಚಿಕೊಳ್ಳದಂತೆ ಸಲಹೆ ನೀಡಿತ್ತು. ಏಕೆಂದರೆ ಆಧಾರ್ ಕಾರ್ಡ್ ದುರ್ಬಳಕೆಯಾಗಬಹುದಾದ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿದೆ.

ಆಧಾರ್ ಕಾರ್ಡ್ ಅನ್ನು ಗುರುತನ್ನು ಸಾಬೀತುಪಡಿಸಲು ಮತ್ತು ವಹಿವಾಟುಗಳನ್ನು ಮಾಡಲು ಮುಕ್ತವಾಗಿ ಬಳಸಬೇಕು. ಆದರೆ ಟ್ವಿಟರ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಬಾರದು ಎಂದು ಯುಐಡಿಎಐ ತನ್ನ ವೆಬ್‌ಸೈಟ್‌ನಲ್ಲಿ ಸುರಕ್ಷತಾ ಸೂಚನೆಯನ್ನು ಜನರಿಗೆ ತಿಳಿಸಿದೆ.

ಇನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 10 ವರ್ಷಗಳ ಹಿಂದೆ ತಮ್ಮ ಆಧಾರ್ ಕಾರ್ಡ್‌ಗಳನ್ನು ಸ್ವೀಕರಿಸಿದ ಮತ್ತು ತಮ್ಮ ವಿವರಗಳನ್ನು ನವೀಕರಿಸದ ಜನರಿಗೆ ಸಾಧ್ಯವಾದಷ್ಟು ಬೇಗ ನವೀಕರಿಸಲು ಸಲಹೆ ನೀಡಿದೆ. ನವೀಕರಿಸಿದ ಆಧಾರ್ ಕಾರ್ಡ್ ಸರ್ಕಾರಿ ಸೇವೆಗಳನ್ನು ಪ್ರವೇಶಿಸಲು, ಬ್ಯಾಂಕ್ ಖಾತೆಗಳನ್ನು ತೆರೆಯಲು ಮುಂತಾದವುಗಳಿಗೆ ಸಹಾಯ ಮಾಡುತ್ತದೆ ಎಂದು ಯುಐಡಿಎಐ ಹೇಳಿದೆ.

For Latest News Updates, Join Our Whatsapp Community🚩
RELATED ARTICLES

Most Popular