HomeKarnatakaBIG NEWS: ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

BIG NEWS: ವಿಧಾನ ಪರಿಷತ್ ಸದಸ್ಯರಾಗಿ ಮೂವರ ನಾಮನಿರ್ದೇಶನ; ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಮುವರ ಹೆಸರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರದ ಶಿಫಾರಸಿಗೆ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.

ಪರಿಷತ್ ಸದಸ್ಯರಾಗಿ ಮಾಜಿ ಸಚಿವೆ, ನಟಿ ಉಮಾಶ್ರೀ, ಎಂ.ಆರ್.ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮನಿರ್ದೇಶನ ಮಾಡಿದ್ದರು. ಮೂವರ ನಾಮನಿರ್ದೇಶನಕ್ಕೆ ರಾಜ್ಯಪಾಲ ಗೆಹ್ಲೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪರಿಷತ್ ಸದಸ್ಯರಾಗಿ ಉಮಾಶ್ರೀ, ಎಂ.ಆರ್.ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರ ಹೆಸರನ್ನು ರಾಜ್ಯಪಾಲರು ಅನುಮೋದಿಸಿರುವ ಹಿನ್ನೆಲೆಯಲ್ಲಿ ಕೆಲ ಕಾಂಗ್ರೆಸ್ ನಾಯಕರಿಗೆ ಅಸಮಾಧಾನವುಂಟಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular