HomeKarnatakaBIG NEWS: ಬಾಕಿ ಬಿಲ್ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ; ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ...!

BIG NEWS: ಬಾಕಿ ಬಿಲ್ ಪಾವತಿಸದಿದ್ದರೆ ಕಾಮಗಾರಿ ಸ್ಥಗಿತ; ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ…!

ಬೆಂಗಳೂರು: ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದೆ. ಬಾಕಿ ಬಿಲ್ ಪಾವತಿ ಮಾಡದಿದ್ದರೆ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ, ಈ ಬಗ್ಗೆ ಮಾಹಿತಿ ನೀಡಿದ್ದು, ಬಿಲ್ ಪಾವತಿ ಮಾಡದಿದ್ದರೆ ಕೆಲಸ ನಿಲ್ಲಿಸುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

25,000 ಕೋಟಿಗೂ ಅಧಿಕ ಬಾಕಿ ಹಣವನ್ನು ಸರ್ಕಾರ ಉಳಿಸಿಕೊಂಡಿದೆ. 7 ಕ್ಕೂ ಹೆಚ್ಚು ಇಲಾಖೆಗಳಿಂದ ಸಾವಿರಾರು ಕೋಟಿ ರೂಪಾಯಿ ಬಾಕಿಯಿದೆ. ಆಗಸ್ಟ್ 31ರೊಳಗೆ ಸರ್ಕಾರ ಬಾಕಿ ಬಿಲ್ ಪಾವತಿ ಮಾಡಬೇಕು. ಇಲ್ಲವಾದಲ್ಲಿ ಕಾಮಗಾರಿ ಸ್ಥಗಿತ ಮಾಡಬೇಕಾದ ಸ್ಥಿತಿ ಬರುತ್ತದೆ. ಆಗಸ್ಟ್ 31ರೊಳಗೆ ಬಿಲ್ ಕ್ಲೀಯರ್ ಮಾಡದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular