HomeKarnatakaRAW ಅಧಿಕಾರಿ ಎಂದು ನಂಬಿಸಿ ವಂಚನೆ; ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

RAW ಅಧಿಕಾರಿ ಎಂದು ನಂಬಿಸಿ ವಂಚನೆ; ನರ್ಸಿಂಗ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಏನೆಲ್ಲ ಕಳ್ಳಾಟಗಳನ್ನು ನಡೆಸಿ ಜನರನ್ನು ವಂಚಿಸಿದ್ದಾನೆ ನೋಡಿ. ತಾನು ಪೊಲೀಸ್ ಹಾಗೂ ‘ರಾ’ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಇಡುಕಿ ಮೂಲದ ಬೆನೆಡಿಕ್ಟ್ ಸಾಬು ಬಂಧಿತ ಆರೋಪಿ. ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಈತ ಕೆಲವರ ಬಳಿ ತಾನು RAW ಅಧಿಕಾರಿ ಎಂದು ಹೇಳುತ್ತಿದ್ದ, ಇನ್ನು ಕೆಲವರ ಬಳಿ ತಾನು ಸಬ್ ಇನ್ಸ್ ಪೆಕ್ಟರ್ ಎಂದು ಹೇಳಿ ವಂಚಿಸುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

6 ತಿಂಗಳ ಹಿಂದೆ ಜಿಎನ್ ಎಂ ಕೋರ್ಸ್ ಗೆ ಸೇರಿದ್ದ ಬೆನೆಡಿಕ್ ಸಾಬು ತಾನು ಕೇರಳದ ಕೃಷಿ ಅಧಿಕಾರಿ ಎಂದು ಪ್ರಾಂಶುಪಲರ ಬಳಿ ಹೇಳಿದ್ದನಂತೆ. ಸಧ್ಯ ತಾನು ‘ರಾ’ ಫೀಲ್ಡ್ ಏಜೆಂಟ್ ಆಗಿರುವುದಾಗಿ ಹೇಳುತ್ತಿದ್ದ ಎನ್ನಲಾಗಿದೆ.

ಕಾಲೇಜಿನಲ್ಲಿ ಡ್ರಗ್ಸ್ ಅವೇರ್ ನೆಸ್ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯ ಕಳ್ಳಾಟ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular