HomeKarnatakaBIG NEWS: ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ; ಸಿಎಂ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕ...

BIG NEWS: ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ; ಸಿಎಂ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಪಕ್ಷಾಂತರ ಪರ್ವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಕ್ಷೇತ್ರ ವಿಚಾರವಗಿ ಚರ್ಚೆಗೆ ಸಿಎಂ ಭೇಟಿಯಾಗುವುದೂ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಕಾಂಗ್ರೆಸ್ ನತ್ತ ಮುಖ ಮಾಡಿದ್ದೇನೆ ಎಂಬುದು ಕೇವಲ ವದಂತಿ. ಕೆಲವರಿಗೆ ಕೆಲ ಅನುಮಾನಗಳಿದ್ದವು. ಅದನ್ನು ಸ್ಪಷ್ಟಪಡಿಸಿದ್ದೇನೆ. ಚುನಾವಣೆ ಮೊದಲು ಕೂಡ ನಾನು ಬಿಜೆಪಿ ತೊರೆಯುತ್ತೇನೆ ಎಂದು ಸುದ್ದಿ ಹಬ್ಬಿಸಿದ್ದರು. ಆಗಲೂ ನಾನು ಬಿಜೆಪಿ ಬಿಡಲ್ಲ ಅಂತ ಹೇಳುತ್ತಲೇ ಬಂದಿದ್ದೆ. ಈಗ ಚುನಾವಣೆ ಮುಗಿದ ಬಳಿಕವೂ ಮತ್ತೆ ಹೇಳುತ್ತಿದ್ದಾರೆ. ಈಗಲೂ ಸ್ಪಷ್ಟವಾಗಿ ಹೇಳುತ್ತಿದ್ದೇನೆ ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ. ಆದರೆ ಕೆಲ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಇದೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular