ಮಡಿಕೇರಿ : ಮೆಡಿಕಲ್ ಕಾಲೇಜಿನಲ್ಲಿ ವಿಕೃತ ಕಾಮಿಯೊಬ್ಬ ಬಟ್ಟೆ ಬಿಚ್ಚಿ ಅಸಭ್ಯ ವರ್ತನೆ ತೋರಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಕಾಮುಕನೋರ್ವ ಮಹಿಳೆಯರ ಹಾಸ್ಟೆಲ್ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈತ ಹುಡುಗಿಯರ ಎದುರು ಬಂದು ಬಟ್ಟೆ ಬಿಚ್ಚಿ ಅಸಭ್ಯ ವರ್ತನೆ ತೋರುತ್ತಿದ್ದಾನೆ ಎಂದು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.ಘಟನೆ ಸಂಬಂಧ ದೂರು ನೀಡಿದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿಲ್ಲ, ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.ಹಲವು ತಿಂಗಳಿನಿಂದ ಈತ ಈ ರೀತಿಯಾಗಿ ವರ್ತಿಸುತ್ತಿದ್ದಾನೆ, ಈತನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.