ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಡುಪಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಮೊ.ನಂ: 9448451111 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read