ʼರಾಷ್ಟ್ರೀಯ ಕ್ರೀಡಾ ದಿನಾಚರಣೆ‌ʼ ಅಂಗವಾಗಿ ವಿವಿಧ ಸ್ಪರ್ಧೆ

10 Best Social Media Campaign Post Ideas for National Sports Day

ಶಿವಮೊಗ್ಗ: ಮೇಜರ್ ಧ್ಯಾನ್‌ ಚಂದ್‌ ರವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂಬಂಧ ಪುರುಷರು ಹಾಗೂ ಮಹಿಳೆಯರಿಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಆ.29 ರಂದು ಬೆಳಗ್ಗೆ 9.30 ರಿಂದ ವಿವಿಧ ಸ್ಫರ್ಧೆಗಳನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಗಳಲ್ಲಿ ಕ್ರೀಡಾ ರಸಪ್ರಶ್ನೆ ಸ್ಪರ್ಧೆ, ಲಗೋರಿ (ಪುರುಷರಿಗೆ ಮಾತ್ರ), ಬಾಂಬ್ ಇನ್ ದಿ ಸಿಟಿ ( ಮಹಿಳೆಯರಿಗೆ ಮಾತ್ರ), ಹಗ್ಗ ಜಗ್ಗಾಟ ಸ್ಪರ್ಧೆ (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ), ನಡಿಗೆ ಸ್ಪರ್ಧೆ (ಪುರುಷರಿಗೆ 4 ಕಿ.ಮೀ., ಮಹಿಳೆಯರಿಗೆ 2 ಕಿ.ಮೀ), ಹಾಕಿ ಸ್ಪರ್ಧೆ (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ) ಸ್ಪರ್ಧೆಗಳಿದ್ದು, ಆಸಕ್ತ ಕ್ರೀಡಾಪಟುಗಳು ಆ.29 ರಂದು ಬೆಳಗ್ಗೆ 9.30ರೊಳಗಾಗಿ ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರು ನೋಂದಾಯಿಸಿಕೊಳ್ಳುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9008949847 ನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read