alex Certify BREAKING : ‘ಚಂದ್ರಯಾನ-3’ ಬಗ್ಗೆ ವ್ಯಂಗ್ಯ : ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಚಂದ್ರಯಾನ-3’ ಬಗ್ಗೆ ವ್ಯಂಗ್ಯ : ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು

ಬೆಂಗಳೂರು : ಇಡೀ ದೇಶವೇ ಚಂದ್ರಯಾನ-3 ಬಗ್ಗೆ ಹೆಮ್ಮೆಪಡುತ್ತಿದ್ದರೆ ನಟ ಪ್ರಕಾಶ್ ರೈ ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇಡೀ ದೇಶವೇ ಹೆಮ್ಮೆ ಪಡುವಂತೆ ಇಸ್ರೋ ವಿಜ್ಞಾನಿಗಳು ಕಾರ್ಯನಿರ್ವಹಿಸಿದ್ದು, ಚಂದ್ರಯಾನ-3 ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಗಾಗಿ ದೇಶಾದ್ಯಂತ ಜನರು ಕಾಯುತ್ತಿದ್ದಾರೆ. ಸುರಕ್ಷಿತವಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಖ್ಯಾತ ನಟ, ನಿರ್ದೇಶಕ ಪ್ರಕಾಶ್ ರೈ ಮಾತ್ರ ಚಂದ್ರಯಾನದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಬ್ರೇಕಿಂಗ್ ನ್ಯೂಸ್ ವಿಕ್ರಂ ಲ್ಯಾಂಡರ್ ಮೂಲಕ ಚಂದ್ರನಿಂದ ಬರುವ ಮೊದಲ ಚಿತ್ರ Wowww..’ಎಂದು ಶೀರ್ಷಿಕೆ ಕೊಟ್ಟು ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಚಹಾ ಸುರಿಯುತ್ತಿರುವ ವ್ಯಂಗ್ಯಚಿತ್ರದ ಫೋಟೋ ಹಾಕಿದ್ದಾರೆ. ಹಿರಿಯ ನಟನ ಈ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ನಿಮ್ಮ ದೇಶ, ಜನರ ಪ್ರಗತಿ, ಸಾಧನೆಯನ್ನು ನೀವು ದ್ವೇಷಿಸಲು ಆರಂಭಿಸದಷ್ಟು ದ್ವೇಷ ನಿಮ್ಮನ್ನು ಆವರಿಸುತ್ತದೆ. ಇದರಿಂದ ಜೀವನ ವ್ಯರ್ಥ ಎಂದು ಕೆಲವರು ಗರಂ ಆಗಿದ್ದಾರೆ.

ತನಗೆ ಎಲ್ಲವನ್ನೂ ಕೊಟ್ಟ ದೇಶವನ್ನೇ ಪ್ರಕಾಶ್ ರೈ  ಅವಮಾನಿಸುತ್ತಿದ್ದಾರೆ ಎಂದು ಹಲವರು ಕಿಡಿಕಾರಿದಾರೆ. ಭಾರತದ ಅಸ್ಮಿತತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಚಂದ್ರಯಾನದ ಬಗ್ಗೆ ಹಿರಿಯ ನಟನ ವ್ಯಂಗ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...