ಬೆಂಗಳೂರು : ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಭರ್ಜರಿ ಅನುದಾನ ಮಂಜೂರು ಮಾಡಲಾಗಿದೆ.
ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ 7.63 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ತೀವ್ರ ಅಚ್ಚರಿಗೆ ಕಾರಣವಾಗಿದೆ. ನೀರು ಪೂರೈಸುವ ಟ್ಯಾಂಕರ್ ಗಳಿಗೆ 1.63 ಕೋಟಿ ರೂ. ಮೀಸಲಿಡಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಸಲು 4 ಕೋಟಿ ರೂಪಾಯಿ ಮೀಸಲು ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂಪಾಯಿ ಅನುದಾನ ಮೀಸಲು ಇಡಲಾಗಿದೆ.