
ಬೆಂಗಳೂರು: ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ದುರಂತವೊಂದು ಸಂಭವಿಸಿದೆ. ವ್ಯಕ್ತಿಯೊಬ್ಬರು ಪಾರ್ಕ್ ನಲ್ಲಿ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮನಗರ ತಾಲೂಕಿನ ಬಿಡದಿ ಬಳಿಯ ವಂಡರ್ ಲಾ ದಲ್ಲಿ 35 ವರ್ಷದ ರಾಜು ಎಂಬ ವ್ಯಕ್ತಿ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾರೆ. ರಾಜು ಜೇಡನಹಳ್ಳಿ ನಿವಾಸಿ. ಸಾಹಸ ಕ್ರೀಡೆಯಾಡುವಾಗ ಬಿದ್ದು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.