HomeIndiaಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಭೇಟಿಗೆ ಅವಕಾಶ ನೀಡುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಪಟ್ಟು;...

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಭೇಟಿಗೆ ಅವಕಾಶ ನೀಡುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಪಟ್ಟು; ಆಸ್ಪತ್ರೆ ನೆಲದ ಮೇಲೆ ಮಲಗಿ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸರ್ಕಾರಿ ಅಧಿಕಾರಿಯಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಭೇಟಿಗೆ ಅವಕಾಶ ಕಲ್ಪಿಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪಟ್ಟು ಹಿಡಿದಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಭೇಟಿಗೆ ಅವಕಾಶ ನೀಡುವಂತೆ ಸ್ವಾತಿ ಮಲಿವಾಲ್ ಒತ್ತಾಯಿಸಿದ್ದಾರೆ. ಸಂತ್ರಸ್ತ ಬಾಲಕಿ ಹಾಗೂ ಆಕೆಯ ತಾಯಿಯನ್ನು ಭೇಟಿಯಾಗಲು ತನಗೆ ಅವಕಾಶ ಕೊಡುತ್ತಿಲ್ಲ. ಪೊಲೀಸರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸ್ವಾತಿ ಮಲಿವಾಲ್, ಸೋಮವಾರ ಬೆಳಿಗ್ಗೆಯಿಂದ ಆಸ್ಪತ್ರೆ ನೆಲದ ಮೇಲೆ ಕುಳಿತಿದ್ದರಿ. ರಾತ್ರಿ ಆಸ್ಪತ್ರೆಯಲ್ಲಿ ನೆಲದ ಮೇಲೆಯೇ ಮಲಗಿ ಪ್ರತಿಭಟಿಸಿದ್ದಾರೆ. ಸ್ವಾತಿ ಮಲಿವಾಲ್ ನೆಲದ ಮೇಲೆ ಮಲಗಿರುವ ಫೋಟೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿ ಪೊಲೀಸರು ನನ್ನಿಂದ ಏನನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ನನಗೆ ಅರ್ಥವಾಗುತ್ತಿಲ್ಲ. ಸಂತ್ರಸ್ತೆಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿದೆಯೇ? ಸರಿಯಾದ ನೆರವು ಸಿಗುತ್ತಿದೆಯೋ ಇಲ್ಲವೋ ಎಲ್ಲವನ್ನೂ ತಿಳಿದುಕೊಳ್ಳಬೇಕಿದೆ. ಸಂತ್ರಸ್ತೆಯನ್ನು ಭೇಟಿಯಾಗುವವರೆಗೂ ಆಸ್ಪತ್ರೆಯಿಂದ ಹೊರಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular