ಬೆಂಗಳೂರು : ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಿರುವ ನಟ ಪ್ರಕಾಶ್ ರೈ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸಂಸದ ಮುನಿಸ್ವಾಮಿ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ್ದಾರೆ.
ನಟ ಪ್ರಕಾಶ್ ರೈ ಗೆ ಭಾರತ ಅಲ್ಲ ಪಾಕಿಸ್ತಾನ ಸೂಕ್ತ ಸ್ಥಳ ಎಂದು ಸಂಸದ ಮುನಿಸ್ವಾಮಿ ಕಿಡಿಕಾರಿದ್ದಾರೆ. ಪ್ರಕಾಶ್ ರೈಗೆ ಭಾರತ ಸೂಕ್ತವಾದ ಸ್ಥಳ ಅಲ್ಲ, ಅವರಿಗೆ ಪಾಕಿಸ್ತಾನ ಅಥವಾ ಆಫ್ಘಾನಿಸ್ತಾನ ಸೂಕ್ತವಾದ ಸ್ಥಳ. ಪ್ರಕಾಶ್ ಪ್ರಕಾಶ್ ರೈ ಭಾರತದಲ್ಲಿ ಇರಲು ಅರ್ಹರಲ್ಲ, ಜನರ ಮುಂದೆ ಹೀರೋ ಆಗಲು ಹೋಗಿ ಜೀರೋ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇಡೀ ದೇಶವೇ ಹೆಮ್ಮೆ ಪಡುವಂತೆ ಇಸ್ರೋ ವಿಜ್ಞಾನಿಗಳು ಕಾರ್ಯನಿರ್ವಹಿಸಿದ್ದು, ಚಂದ್ರಯಾನ-3 ಚಂದ್ರನ ಮೇಲ್ಮೈ ಮೇಲೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಗಾಗಿ ದೇಶಾದ್ಯಂತ ಜನರು ಕಾಯುತ್ತಿದ್ದಾರೆ. ಸುರಕ್ಷಿತವಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಖ್ಯಾತ ನಟ, ನಿರ್ದೇಶಕ ಪ್ರಕಾಶ್ ರೈ ಮಾತ್ರ ಚಂದ್ರಯಾನದ ಬಗ್ಗೆ ವ್ಯಂಗ್ಯವಾಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಬ್ರೇಕಿಂಗ್ ನ್ಯೂಸ್ ವಿಕ್ರಂ ಲ್ಯಾಂಡರ್ ಮೂಲಕ ಚಂದ್ರನಿಂದ ಬರುವ ಮೊದಲ ಚಿತ್ರ Wowww..’ಎಂದು ಶೀರ್ಷಿಕೆ ಕೊಟ್ಟು ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಚಹಾ ಸುರಿಯುತ್ತಿರುವ ವ್ಯಂಗ್ಯಚಿತ್ರದ ಫೋಟೋ ಹಾಕಿದ್ದಾರೆ. ಹಿರಿಯ ನಟನ ಈ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.