ಬೆಂಗಳೂರು : ಕಾಂಗ್ರೆಸ್ ನ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಹೆಚ್ಡಿಕೆ ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಜೆಡಿಎಸ್ ನಿಂದ ಯಾರೂ ಕಾಂಗ್ರೆಸ್ ಗೆ ಹೋಗಲ್ಲ, ಕಾಂಗ್ರೆಸ್ ನ ನಿಂದಲೇ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ ಎಂದು ಹೆಚ್ಡಿಕೆ ಹೇಳಿಕೆ ನೀಡಿದ್ದಾರೆ. ಸರ್ವ ಪಕ್ಷ ಸಭೆಗೆ ನನಗೆ ಆಹ್ವಾನ ನೀಡಿದ್ದಾರೆ, ನಾನು ಸಭೆಗೆ ಹೋಗುತ್ತೇನೆ ಎಂದು ಹೇಳಿದರು. ಸರ್ವಪಕ್ಷ ಸಭೆಗೆ ಹೋಗುವುದು ನನ್ನ ಕರ್ತವ್ಯ ಎಂದರು. ಆದರೆ ಕುಮಾರಸ್ವಾಮಿ ಹೇಳಿದಂತೆ ಮಾಡುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾನು ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದ್ದೆನಾ? ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಾ ಉಡಾಫೆಯಾಗಿ ಮಾತನಾಡುತ್ತಿದ್ದಾರೆ ಎಂದು ಗರಂ ಆದರು.
ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಜೆಡಿಎಸ್ ನ ಹಲವಾರು ಶಾಸಕರನ್ನು ಸಂಪರ್ಕದಲ್ಲಿಟ್ಟುಕೊಂಡಿದೆ ಮತ್ತು ಅವರನ್ನು ಪಕ್ಷಕ್ಕೆ ಕರೆತರಲು ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಅಧಿಕೃತವಾಗಿ ಪಕ್ಷದ ಬೆಂಬಲವನ್ನು ಪಡೆಯಲು ಜೆಡಿಎಸ್ ಮೂರನೇ ಎರಡರಷ್ಟು ಶಾಸಕರನ್ನು ಪಡೆಯಲು ಯೋಜಿಸುತ್ತಿದೆ ಹೇಳಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಮತಗಳನ್ನು ಮತ್ತಷ್ಟು ಕ್ರೋಢೀಕರಿಸುವ ಉದ್ದೇಶದಿಂದ ಕಾಂಗ್ರೆಸ್ ಜೆಡಿಎಸ್ ನ ಬಹುತೇಕ ಶಾಸಕರೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.