ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಡಿ ಈವರೆಗೆ ಬರೋಬ್ಬರಿ 44 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ.
ಈ ಕುರಿತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಶಕ್ತಿ ಯೋಜನೆಯಡಿ 43 ಕೋಟಿಗೂ ಅಧಿಕ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 1,013 ಕೋಟಿಯಷ್ಟು ಟಿಕೆಟ್ ವಹಿವಾಟು ನಡೆದಿದೆ.
ಯೋಜನೆ ಜಾರಿಯಾದಾಗಿನಿಂದ ಈವರೆಗೆ ನಾಲ್ಕು ಸಾರಿಗೆ ನಿಗಮಗಳ ಮೂಲಕ 43,61,49,219 ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. 1013.94 ಕೋಟಿ ಮೊತ್ತದ ಟಿಕೆಟ್ ಪಡೆದಿದ್ದಾರೆ.
ಕೆ.ಎಸ್.ಆರ್.ಟಿ.ಸಿಯಲ್ಲಿ 13,26,08,022 ಮಹಿಳೆಯರು, ಬಿಎಂಟಿಸಿಯಲ್ಲಿ 14,43,67,198 ಮಹಿಳೆಯರು, ವಾಯುವ್ಯ ಕರ್ನಾಟಕ ಸಾರಿಗೆಯಲ್ಲಿ 10,07,26,888 ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 5,84,47,111 ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಮಾಹಿತಿ ನೀಡಿದೆ.