ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ಹೊಸ ಪೀಠ ರಚನೆ ಮಾಡಲಾಗಿದೆ.
ನ್ಯಾಯಮೂರ್ತಿಗಳಾದ ಗವಾಯಿ, ನರಸಿಂಹ, ಬಿ.ಕೆ. ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಪೀಠ ರಚನೆ ಮಾಡಲಾಗಿದ್ದು, ಶುಕ್ರವಾರ ಸುಪ್ರೀಂಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಸಲಾಗುವುದು.
ಮಳೆ ಕೊರತೆಯಾಗಿರುವುದರಿಂದ ಕಾವೇರಿ ನದಿ ನೀರಿಗೆ ಕರ್ನಾಟಕ, ತಮಿಳುನಾಡು ನಡುವೆ ಹಗ್ಗಜಗ್ಗಾಟ ನಡೆದಿದೆ. ತನ್ನ ಪಾಲಿನ ನೀರು ಬಿಡುವಂತೆ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.