ಬೆಂಗಳೂರು: ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಮೋಜಣಿ ಸೇವೆಗೆ ಚಾಲನೆ ನೀಡಲಾಗುವುದು.
ಭೂಮಾಪನ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯ ಯೋಜನೆ 11 ಇ ನಕ್ಷೆ, ಜಮೀನಿನ ತತ್ಕಾಲ್ ಪೋಡಿಗಾಗಿ ಅರ್ಜಿ, ಭೂ ಪರಿವರ್ತನೆಗಾಗಿ ಅರ್ಜಿ, ಹದ್ದುಬಸ್ತು ಅರ್ಜಿ ಸೇವೆಯನ್ನು ಗ್ರಾಮ ಪಂಚಾಯಿತಿ ಕಚೇರಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಪಡೆದುಕೊಳ್ಳಬಹುದು. ಇದರಿಂದ ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಈ ಸೇವೆಗಳಿಗೆ ಚಾಲನೆ ನೀಡಿದ್ದಾರೆ. ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಗ್ರಾಮಾಂತರ ಪ್ರದೇಶದ ಜನ ಈ ಸರ್ಕಾರಿ ಸೇವೆಗಳನ್ನು ಪಡೆಯಲು ತಾಲೂಕು ಅಥವಾ ಹೋಬಳಿ ಮಟ್ಟದ ಕಚೇರಿಗಳಿಗೆ ಅಲೆದಾಡಬೇಕಿತ್ತು. ಹೆಚ್ಚಿನ ಜನಸಂದಣಿಯ ಕಾರಣ ತ್ವರಿತ ಗತಿಯಲ್ಲಿ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಸೇವೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದ 3.7 ಕೋಟಿ ಜನ ಸುಮಾರು 78 ಲಕ್ಷ ಕುಟುಂಬಗಳು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಬಹು ದಾಖಲೆ ಇಲಾಖೆಯ ಯೋಜನೆಗಳನ್ನು ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.