HomeKarnatakaಪ್ರವಾಸಕ್ಕೆ ಕರೆದೊಯ್ದು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ

ಪ್ರವಾಸಕ್ಕೆ ಕರೆದೊಯ್ದು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಇಬ್ಬರು ಯುವಕರು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ ಜಿಲ್ಲೆ ಸಾಗರ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಮತ್ತು ಶಹಬಾಜ್ ಎಂಬುವರ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆ. 18 ರಂದು 16 ವರ್ಷದ ಅಪ್ರಾಪ್ತೆಯನ್ನು ಸೊರಬ ರಸ್ತೆಯ ಅಜ್ಜಿ ಮನೆಯಿಂದ ಜೋಗ ಜಲಪಾತ ಹಾಗೂ ನಿಪ್ಪಳಿ ಫಾಲ್ಸ್ ನೋಡಲು ಕರೆದುಕೊಂಡು ಹೋಗಿದ್ದಾರೆ. ನಿಪ್ಪಳಿ ಫಾಲ್ಸ್ ಬಳಿ ತಂಪು ಪಾನೀಯದಲ್ಲಿ ಮತ್ತೇರಿಸುವ ಔಷಧ ಕುಡಿಸಿ ಎಚ್ಚರತಪ್ಪಿದ್ದ ಸಂದರ್ಭದಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular