ದಾವಣಗೆರೆ: ಪಕ್ಷದಲ್ಲಿ ಅಸಮಾಧಾನ ಇದ್ದಾಗ ಪಕ್ಷಾಂತರ ಮಾಡುವುದು ಸಹಜ ಎಂದು ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಇಲ್ಲ, ಏನೂ ಇಲ್ಲ. ಕೆಲವರು ಅವರಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ನಮ್ಮ ಪಕ್ಷದವರು ಆಪರೇಷನ್ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಆರು ತಿಂಗಳಲ್ಲಿ ಸರ್ಕಾರ ಪತನವಾಗುತ್ತೆ ಎಂದು ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚೆನ್ನಾಗಿಯೇ ನಡೆಯುತ್ತಿದೆ. ಯತ್ನಾಳ್ ನೀಡಿರುವ ಹೇಳಿಕೆ ಭ್ರಮೆ ಮಾತ್ರ. ಅದಕ್ಕೆ ಕಾಂಗ್ರೆಸ್ ಪಕ್ಷ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಒಬ್ಬರಿಗೇ ಆಸ್ತಿ ಬರೆದು ಕೊಡಲಾಗುತ್ತದೆಯೇ ಪಕ್ಷ ಬೆಳೆಯಬೇಕು ಎಂದಾಗ ಕೆಲವು ಸಂದರ್ಭದಲ್ಲಿ ಮತ್ತೊಬ್ಬರಿಗೆ ಅವಕಾಶ ಮಾಡಿಕೊಡುವುದು ಇದ್ದೇ ಇರುತ್ತದೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.
ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಗೆ ಬರುವುದರ ಬಗ್ಗೆ ನನಗೆ ಗೊತ್ತಿಲ್ಲ. ಆಯನೂರು ಮಂಜುನಾಥ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಒಳ್ಳೆಯ ವಾತಾವರಣ ಇದೆ. ಬಿ.ಕೆ. ಹರಿಪ್ರಸಾದ್ ಒಳ್ಳೆಯ ನಾಯಕ. ಸಹಕಾರ ಇದ್ದೇ ಇದೆ. ತಳ ಸಮುದಾಯದ ಸಮಾವೇಶ ಮಾಡುತ್ತಿರುವುದರ ಬಗ್ಗೆ ಗೊತ್ತಿಲ್ಲ. ಅನೇಕ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳು ಇರುತ್ತವೆ. ನಂತರ ತಿಳಿಯಾಗುತ್ತವೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.