ಬೆಂಗಳೂರು : 2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ತಾಕಿನಲ್ಲಿ ಹನಿ ನೀರಾವರಿ ಅಳವಡಿಕೆಗಾಗಿ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೇ.75 ರಷ್ಟು ಸಾಮಾನ್ಯ ವರ್ಗದ ರೈತರಿಗೆ ಹಾಗೂ ಶೇ.90 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದ ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಸೌಲಭ್ಯ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಗುಲಾಬಿ, ಸುಗಂಧರಾಜ, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಮಿನಿ ಟ್ರ್ಯಾಕ್ಟರ್, ಪ್ರಾಥಮಿಕ ಸಂಸ್ಕರಣ ಘಟಕ, ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರ ಸಹಾಯಧನ ಸೌಲಭ್ಯವಿರುತ್ತದೆ.
ಆಸಕ್ತ ರೈತರು ಸೆ.21 ರೊಳಗಾಗಿ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಖಾತೆ ಜೆರಾಕ್ಸ್, ಪಾಸ್ ಪೋರ್ಟ್ ಸೈಜ್ ಫೆÇೀಟೋ ಮತ್ತು ಜಾತಿ ಪ್ರಮಾಣ ಪತ್ರಗಳೊಂದಿಗೆ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಅರ್ಜಿಯನ್ನು ಸಲ್ಲಿಬಹುದು.