ಶಿವಮೊಗ್ಗ : ‘ಜೆಡಿಎಸ್’ ಗೆ ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಗುಡ್ ಬೈ ಹೇಳಲು ನಿರ್ಧರಿಸಿದ್ದು, ಅಧಿಕೃತವಾಗಿ ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ನಾಳೆ ತಮ್ಮ ಬೆಂಬಲಿಗ ರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 1೦:30ಕ್ಕೆ ಅಧಿಕೃತವಾಗಿ ‘ಕೈ’ ಹಿಡಿಯಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು ಸಿಎಂ ತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಜೊತೆ ಇತ್ತೀಚೆಗೆ ಈ ಸಂಬಂಧ ಮಾತುಕತೆ ನಡೆಸಲಾಗಿದೆ. ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ವಹಿಸುವ ಎಲ್ಲ ಜವಾಬ್ದಾರಿಗಳಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಮುಂಬರುವ ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ತೀರ್ಮಾನಕ್ಕೆ ಬಂದಿದ್ದೇವೆ ಎಂದರು. ಆಯನೂರು ಮಂಜುನಾಥ್ ಬೆಂಬಲಿಗರಾದ ಮಹೇಂದ್ರನಾಥ, ಪರಂಧಾಮ ರೆಡ್ಡಿ, ಶಿ ಜು ಪಾಶಾ, ಆಯನೂರು ಸಂತೋಷ್, ಲಕ್ಷ್ಮಣಪ್ಪ ಸಹಿತ ಹಲವರು ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.