ದಾವಣಗೆರೆ: ಸಾರಿಗೆ ಇಲಾಖೆಯಲ್ಲಿ 13,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾರಿಗೆ ಸಂಸ್ಥೆಯ 4 ನಿಗಮಗಳಲ್ಲಿ 16,000 ಹುದ್ದೆಗಳು ಖಾಲಿ ಇವೆ. 13 ಸಾವಿರ ಸಿಬ್ಬಂದಿ ನೇಮಕಾತಿಗೆ ತೀರ್ಮಾನ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
4000 ಬಸ್ ಖರೀದಿಗೆ ಟೆಂಡರ್ ಆಗಿದ್ದು, ಹೆಚ್ಚುವರಿ ಒಂದು ಸಾವಿರ ಬಸ್ ಗಳ ಖರೀದಿ ಸೇರಿ ಒಟ್ಟು 5 ಸಾವಿರ ಬಸ್ ಗಳ ಖರೀದಿಸಲಾಗುವುದು. ನಗರ, ಗ್ರಾಮೀಣ ಸಾರಿಗೆಗೆ ಎಲೆಕ್ಟ್ರಾನಿಕ್ ಬಸ್ ಗಳನ್ನು ನೀಡಲು ಉದ್ದೇಶಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ನಿಲ್ಲಿಸಿದ್ದ ಮಾರ್ಗಗಳಲ್ಲಿ ಬಸ್ ಸಂಚಾರ ಪುನಾರಂಭಿಸಲಾಗುವುದು. ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಿದ ಒಟ್ಟು ಮೊತ್ತದಲ್ಲಿ 4 ನಿಗಮಗಳಿಗೆ ಜೂನ್ ತಿಂಗಳಲ್ಲಿ ಶೇಕಡ 80ರಷ್ಟು ಮೊತ್ತ ಪಾವತಿ ಮಾಡಲಾಗಿದೆ. ಉಳಿದ ಮೊತ್ತವನ್ನು ಕೂಡ ಶೀಘ್ರವೇ ಪಾವತಿಸುವುದಾಗಿ ತಿಳಿಸಿದ್ದಾರೆ.