HomeKarnatakaಉಪನ್ಯಾಸಕರಿಗೆ ಗುಡ್ ನ್ಯೂಸ್: ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ

ಉಪನ್ಯಾಸಕರಿಗೆ ಗುಡ್ ನ್ಯೂಸ್: ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಸಮ್ಮತಿ

ಬೆಂಗಳೂರು: ಉಪನ್ಯಾಸಕರಿಗೆ ಕಾಲಮಿತಿ ಬಡ್ತಿ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಪ್ರೌಢಶಾಲೆಯಿಂದ ಬಡ್ತಿ ಪಡೆದು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಿಗೆ ಕಾರ್ಯನಿರ್ವಹಿಸುತ್ತಿರುವವರಿಗೆ 10, 15, 20, 25 ವರ್ಷಗಳ ಕಾಲ ಮಿತಿ ಬಡ್ತಿ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಮತ್ತು ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಪ್ರತಿನಿಧಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ ಚರ್ಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲ ಮಿತಿ ಬಡ್ತಿ ಸೇರಿ ಉಪನ್ಯಾಸಕರ ಹಲವು ಬೇಡಿಕೆ ಈಡೇರಿಸಲು ಸಚಿವರು ಒಪ್ಪಿದ್ದಾರೆ. ಪ್ರೌಢಶಾಲೆಯಿಂದ ಪದೋನ್ನತಿ ಪಡೆದು ವನ್ನು ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ 10 ರಿಂದ 25 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡಲಾಗುತ್ತದೆ. 2008ರ ಆಗಸ್ಟ್ 1 ರಿಂದ ನೇಮಕವಾದ ಉಪನ್ಯಾಸಕರಿಗೆ ಒಂದು ವಿಶೇಷ ವೇತನ ಬಡ್ತಿ ಮಂಜೂರು ಮಾಡಲಿದ್ದು, ಉಳಿದ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular