ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ (Vikram Lander) ಸಾಫ್ಟ್ ಲ್ಯಾಂಡಿಂಗ್ (Soft landing) ಯಶಸ್ವಿಯಾಗಿದೆ. ಈ ಮೂಲಕ ಭಾರತ ಅಮೆರಿಕ, ರಷ್ಯಾ, ಚೀನಾದ ಬಳಿಕ ಐತಿಹಾಸಿಕ ಸಾಧನೆ ಮಾಡಿದೆ.
ಚಂದ್ರಯಾನ 3 ಬಗ್ಗೆ ವ್ಯಂಗ್ಯ ಮಾಡಿ ಟ್ವಿಟ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಇದೀಗ ಚಂದ್ರಯಾನ 3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳವನ್ನು ಯಶಸ್ವಿಯಾಗಿ ತಲುಪಿದೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ.
ನಟ ಪ್ರಕಾಶ್ ರಾಜ್ ಟ್ವಿಟರ್ ನಲ್ಲಿ, ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು , ಇದು ದಾರಿಯಾಗಲಿ ಎಂದು ಬರೆದುಕೊಂಡಿದ್ದಾರೆ.