HomeKarnatakaBIG NEWS : ಜೇವರ್ಗಿ ಶಾಸಕರ ನಿವಾಸದ ಬಳಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

BIG NEWS : ಜೇವರ್ಗಿ ಶಾಸಕರ ನಿವಾಸದ ಬಳಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ : ಶಾಸಕರ ನಿವಾಸದ ಬಳಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶರಣನಗರದಲ್ಲಿ ನಡೆದಿದೆ.

KKRDB ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮೃತರನ್ನು ದೇವಪ್ಪ(35) ಎಂದು ಗುರುತಿಸಲಾಗಿದೆ. ಶಾಸಕರ ನಿವಾಸದ ಬಳಿ ಮರವೊಂದಕ್ಕೆ ನೇಣುಬಿಗಿದುಕೊಂಡು ದೇವಪ್ಪಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದೇವಪ್ಪ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular