ಬೆಂಗಳೂರು : ಮಹಿಳೆಯರಿಗೆ 2000 ರೂ ನೀಡುವ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಹೌದು, ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ನೋಂದಣಿಯಲ್ಲಿ ರಾಜ್ಯದಲ್ಲೇ ಹಾವೇರಿ ಜಿಲ್ಲೆ ನಂಬರ್ 1 ಸ್ಥಾನ ಪಡೆದಿದೆ. ಹಾವೇರಿ ಜಿಲ್ಲೆಯಲ್ಲಿ 3.94 ಲಕ್ಷ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳಿದ್ದು, ಇದುವೆರೆಗೆ 3.48 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವೇದಿಕೆ ನಿರ್ಮಾಣ ಕಾಮಗಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದ್ದಾರೆ.