ಬೆಂಗಳೂರು : ಇಡೀ ವಿಶ್ವವೇ ಗುರುತಿಸಿ ಕೊಂಡಾಡುತ್ತಿರುವ ಇಸ್ರೋ ಸಂಸ್ಥೆ ನಮ್ಮ ಕರ್ನಾಟಕದ ನೆಲದಲ್ಲಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC ಕೇಂದ್ರಕ್ಕೆ ಸಿಎಂ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ನಂತರ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಇವರು ಚಂದ್ರಯಾನ-3 ಯೋಜನೆಯ ಯಶಸ್ಸಿನ ಹಿಂದಿರುವ ಶಕ್ತಿಗಳು. ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರದ ಮೇಲೆ ಇಳಿದ ಕ್ಷಣದಿಂದ ಇಡೀ ವಿಶ್ವವೇ ಇವರ ಸಾಧನೆಯನ್ನು ಕೊಂಡಾಡುತ್ತಿದೆ. ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಇಂದು ಭೇಟಿನೀಡಿ ಇಂಥದ್ದೊಂದು ಅಸಾಧಾರಣ ಸವಾಲನ್ನು ಸಾಧ್ಯವಾಗಿಸಿ ಐತಿಹಾಸಿಕ ಸಾಧನೆ ಮಾಡಿದ ನಮ್ಮ ಹೆಮ್ಮೆಯ ವಿಜ್ಞಾನಿ ಮಿತ್ರರ ಪರಿಶ್ರಮ ಮತ್ತು ಕಾರ್ಯಕ್ಷಮತೆಯನ್ನು ಅಭಿನಂದಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದೆ. ಇಡೀ ವಿಶ್ವವೇ ಗುರುತಿಸಿ ಕೊಂಡಾಡುತ್ತಿರುವ ಇಸ್ರೋ ಸಂಸ್ಥೆ ನಮ್ಮ ಕರ್ನಾಟಕದ ನೆಲದಲ್ಲಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿರುವ ಇಸ್ರೋ ಮುಂದಿನ ದಿನಗಳಲ್ಲಿ ಮಾನವ ಸಹಿತ ಚಂದ್ರಯಾನ ಹಾಗೂ ಸೌರಗ್ರಹ ಯಾನಗಳನ್ನೂ ಸಾಧಿಸಿ ಭಾರತೀಯರ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.