‘ಚಂದ್ರಯಾನ -3’ ಇಸ್ರೋ ತಂಡದಲ್ಲಿ ಶಿವಮೊಗ್ಗದ ಮಹಿಳೆ : ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ.

ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ  ಕೋಣಂದೂರು  ಮಾಜಿ ಶಾಸಕ ಲಿಂಗಪ್ಪ ಅವರ ಪುತ್ರಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಉನ್ನತ ವ್ಯಾಸಂಗ ಮಾಡಿ ನಂತರ ಇಸ್ರೋ ದಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ವಿಜ್ಞಾನಿ ಶಿವಾನಿ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಜನರು ಪೋಸ್ಟ್ ಹಾಕುವ ಮೂಲಕ ‘ಶಿವಮೊಗ್ಗ ಮೂಲದ ವಿಜ್ಞಾನಿ’ ಎಂದು ಹೆಮ್ಮೆ ಪಡುತ್ತಿದ್ದಾರೆ. ಮಲೆನಾಡು ಮೂಲದ ಮಹಿಳೆಯ ಸಾಧನೆಗೆ ಎಲ್ಲಾ ಕಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆನಡೆಸಿದ (ಇಸ್ರೋ) ಚಂದ್ರಯಾನ -3 ಮಿಷನ್ ಯಶಸ್ವಿಯಾಗಿದೆ. ಈ ಹಿನ್ನೆಲೆ ದೇಶಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 40 ದಿನಗಳ ಪಯಣ ಆರಂಭಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಚಂದ್ರಯಾನ-3 ಮಿಷನ್ ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾಗಿ ಇಳಿಯಿತು, ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾದ ಇಳಿಯುವಿಕೆಯನ್ನು ಸಾಧಿಸಿದ ಮೊದಲ ದೇಶವಾಗಿ ಭಾರತ ಸಾಧನೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read