ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಹಾಗೂ 6 ವರ್ಷದೊಳಗಿನ ಮಕ್ಕಳ ಆರೋಗ್ಯ ಪೌಷ್ಠಿಕತೆ ಸುರಕ್ಷತೆಗೆ ಶೀಘ್ರವೇ ಕೂಸಿನ ಮನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜೊತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಜೆಟ್ ನಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 6 ವರ್ಷದೊಳಗಿನ ಮಕ್ಕಳ ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ 4,000 ಕೂಸಿನ ಮನೆಗಳನ್ನು ಶೀಘ್ರವೇ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು ಕಲ್ಯಾಣ ಕರ್ನಾಟಕದಲ್ಲಿ 400 ಹೈಟೆಕ್ ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತಲಾ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಬೇಕು ಎಂದು ಹೇಳಿದ್ದಾರೆ.