ಚಾಮರಾಜನಗರ: ಪಂಪ್ ಸೆಟ್ ಗಳಿಗೆ ರೈತರ ಆಧಾರ್ ಜೋಡಣೆ ಮಾಡಲು ಬಂದಿದ್ದ ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರೈತ ಸಂಘದ ಕಾರ್ಯಕರ್ತರು ದಿಗ್ಬಂದನ ಹಾಕಿದ್ದಾರೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಗುರುವಾರ ಘಟನೆ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಪಂಪ್ಸೆಟ್ ಗಳಿಗೆ ರೈತರ ಆಧಾರ್ ಜೋಡಣೆ ಮಾಡುವಂತೆ ಹೇಳಿದ್ದು, ಆಧಾರ್ ಕಾರ್ಡ್ ನಂಬರ್ ಪಡೆಯಲು ಮುಂದಾಗಿದ್ದಾರೆ.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಅವರ ನೇತೃತ್ವದಲ್ಲಿ ರೈತ ಸಂಘದ ಕಾರ್ಯಕರ್ತರು, ಆಧಾರ್ ಜೋಡಣೆಗೆ ಬಂದಿದ್ದ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರದಿಂದ ಯಾವುದೇ ಆದೇಶ ನೀಡದಿದ್ದರೂ, ಅಧಿಕಾರಿಗಳು ರೈತರ ಜಮೀನುಗಳಲ್ಲಿ ಪಂಪ್ಸೆಟ್ ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ಮಾಡಬೇಕೆಂದು ಬಲವಂತವಾಗಿ ರೈತರಿಂದ ಆಧಾರ್ ಕಾರ್ಡ್ ಪಡೆಯುತ್ತಿದ್ದಾರೆ ಎಂದು ದೂರಿದ್ದಾರೆ.