‘ಚಾಯ್ ವಾಲಾ ಈಗ ಮಂಗಳ, ಶುಕ್ರ ಗ್ರಹಗಳಲ್ಲಿ ಅಂಗಡಿ ಇಟ್ಟಿದ್ದಾನೆ’ : ನಟ ಪ್ರಕಾಶ್ ರಾಜ್ ಮತ್ತೊಂದು ವಿವಾದಾತ್ಮಕ ಟ್ವೀಟ್

Chandrayaan 3: Prakash Raj Booked Over Viral Controversial Tweet, Actor  Reacts | People News | Zee News‘ಚಂದ್ರಯಾನ-3’ ಬಗ್ಗೆ ವ್ಯಂಗ್ಯವಾಡಿದ್ದ ನಟ ‘ಪ್ರಕಾಶ್ ರಾಜ್’ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಪೇಚಿಗೆ ಸಿಲುಕಿದ್ದಾರೆ.

ಮಲಯಾಳಿ #Chaiwala ಎಲ್ಲಿ ಎಂದು ಇನ್ನೂ ಬಡಬಡಿಸುತ್ತಿರುವ .. ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೆ.. ಅವನು ಬುದ್ದಿವಂತ … ಆತನೀಗ ಮಂಗಳ .. ಶುಕ್ರ ಗ್ರಹಗಳಲ್ಲಿ ಅಂಗಡಿಯಿಟ್ಟಿದ್ದಾನೆ .. ಸಾಧ್ಯವಾದರೆ ಹೋಗಿ ಎಂದು ನಟ ಪ್ರಕಾಶ್

ರಾಜ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮತ್ತಷ್ಟು ನಟ ಪ್ರಕಾಶ್ ರೈ ಮತ್ತಷ್ಟು ವಿವಾದ ಸೃಷ್ಟಿಸಿದ್ದಾರೆ.

ಇಡೀ ದೇಶವೇ ಚಂದ್ರಯಾನ-3 ಬಗ್ಗೆ ಹೆಮ್ಮೆಪಡುತ್ತಿದ್ದರೆ ನಟ ಪ್ರಕಾಶ್ ರೈ ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರೈ ವಿರುದ್ಧ ದೂರು ಕೂಡ ದಾಖಲಾಗಿತ್ತು. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಬ್ರೇಕಿಂಗ್ ನ್ಯೂಸ್ ವಿಕ್ರಂ ಲ್ಯಾಂಡರ್ ಮೂಲಕ ಚಂದ್ರನಿಂದ ಬರುವ ಮೊದಲ ಚಿತ್ರ Wowww..’ಎಂದು ಶೀರ್ಷಿಕೆ ಕೊಟ್ಟು ಇಸ್ರೋ ಮಾಜಿ ಮುಖ್ಯಸ್ಥ ಕೆ.ಶಿವನ್ ಚಹಾ ಸುರಿಯುತ್ತಿರುವ ವ್ಯಂಗ್ಯಚಿತ್ರದ ಫೋಟೋ ಹಾಕಿದ್ದರು. ತನಗೆ ಎಲ್ಲವನ್ನೂ ಕೊಟ್ಟ ದೇಶವನ್ನೇ ಪ್ರಕಾಶ್ ರೈ ಅವಮಾನಿಸುತ್ತಿದ್ದಾರೆ ಎಂದು ಹಲವರು ಕಿಡಿಕಾರಿದಾರೆ. ಭಾರತದ ಅಸ್ಮಿತತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read