ಯಾದಗಿರಿ : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ (PDO ) ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸುಮಾರು 19 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ ಗ್ರಾಮದಲ್ಲಿ 19 ಮಂದಿಗೆ ಇದ್ದಕ್ಕಿದ್ದ ಹಾಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ವಾಂತಿಭೇದಿಯಿಂದ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲುಷಿತ ನೀರು ಸರಬರಾಜು ಮಾಡಿದ ಗಾಜರಕೂಟ ಗ್ರಾಮ ಪಂಚಾಯ್ತಿಯ ಪಿಡಿಓ ಮಲ್ಲಾರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. ಯಾದಗಿರಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗಿರೀಮಾ ಪನ್ವಾರ್ ಈ ಆದೇಶ ಹೊರಡಿಸಿದ್ದಾರೆ.
ನೀರಿನ ಟ್ಯಾಂಕ್ ಸ್ವಚ್ಛಗೊಳಿಸದೇ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ಈ ವಿಚಾರ ಸಾರ್ವಜನಿಕ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಕರ್ತವ್ಯಲೋಪದಡಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.