ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಖ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.1 ಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡಿದೆ.
ಕಾವೇರಿ ನೀರು ಹರಿಸಿ ಅಂತಾ ತಮಿಳುನಾಡು ಖ್ಯಾತೆ ತೆಗೆದಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. . ಇವತ್ತು ಕಾವೇರಿ ಕದನ ಬಗ್ಗೆ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿದ ಕೋರ್ಟ್ ಈ ತಕ್ಷಣಕ್ಕೆ ಆದೇಶ ಹೊರಡಿಸುವುದು ಕಷ್ಟ ಎಂದು ಸೆ.1 ಕ್ಕೆ ವಿಚಾರಣೆ ಮುಂದೂಡಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಾದರೂ ಕಾವೇರಿ ನೀರಿಗಾಗಿ ತಗಾದೆ ತೆಗೆದು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ರಾಜ್ಯಕ್ಕೆ ದಿನಕ್ಕೆ 24,000 ಕ್ಯೂಸೆಕ್ ನೀರು ಹರಿಸಬೇಕು ಎಂದು ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ತಮಿಳುನಾಡಿನ ಅರ್ಜಿ ಯಾವುದೇ ಕಾನೂನು ಆಧಾರ ಹೊಂದಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿತ್ತು.
ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆ ಮಳೆ ಆಗಿಲ್ಲ, ಸರಾಸರಿ ಮಳೆಯಾಗದೇ ನೀರಿನ ಸಂಗ್ರಹ ಕೊರತೆ ಇದೆ. ಈ ಜಲ ವರ್ಷದಲ್ಲಿ ನಿಗದಿತ ನೀರು ಹರಿಸುವುದು ಕಷ್ಟ, ಅಷ್ಟು ಪ್ರಮಾಣದ ನೀರಿನ ಲಭ್ಯತೆಯು ಡ್ಯಾಂಗಳಲ್ಲಿ ಇಲ್ಲ. ಈವರೆಗೂ ಮಳೆ ನೀರಿನ ಕೊರತೆಯನ್ನು ಅನುಭವಿಸುತ್ತಿದ್ದೇವೆ ಎಂದು ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.