![](https://kannadadunia.com/wp-content/uploads/2023/01/accident.1.38550.jpg)
ವಯನಾಡ್: ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದೆ.
ವಯನಾಡ್ ನ ತಲಪ್ಪುಳ ಬಳಿ ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ರಸ್ತೆಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 9 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜೀಪ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದುದೇ ಅಪಘಾತಕ್ಕೆ ಕರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.