ಬೆಂಗಳೂರು: ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಸಂಚಾರ ಮಾರ್ಗದಲ್ಲಿ ಕೆಲ ಬದಲಾವಣೆಗಳಾಗಿದ್ದು, ಪರ್ಯಾಯ ಮಾರ್ಗ ಅನುಸರಿಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.
ಬೆಳಿಗ್ಗೆ 4:30ರಿಂದ ಬೆಳಿಗ್ಗೆ 9:30ರವರೆಗೆ ಸಂಚಾರ ಬದಲಾವಣೆ ಮಾಡಲಾಗಿದೆ. ಹಳೇ ಏರ್ ಪೋರ್ಟ್ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ (ಮೇಖ್ರೀ ಸರ್ಕಲ್) ಸಿ.ವಿ.ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ) ಮಾಗಡಿ ರಸ್ತೆ, ಗೊರಗುಂಟೆ ಪಾಳ್ಯ ಜಂಕ್ಷನ್ ನಿಂದ ಸೋಮನಹಳ್ಳಿ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
ಇಂದು ಬೆಳಗ್ಗೆ 4.30 ರಿಂದ ಬೆಳಗ್ಗೆ 9.30 ರವರೆಗೆ ಹಳೆ ವಿಮಾನ ನಿಲ್ದಾಣ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆ, ಯಶವಂತಪುರ ಮೇಲ್ಸುತೇವೆ, ಮಾಗಡಿ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆ ಬದಲು ಪರ್ಯಾಯ ರಸ್ತೆಗಳನ್ನು ಬಳಸಲು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.ಈ ಮಾರ್ಗದಲ್ಲಿ ಇಂದು ಮುಂಜಾನೆ 4ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.