HomeKarnatakaಕಾಂಗ್ರೆಸ್ ಗೆ ಹೋಗಲ್ಲ ಎಂದ ಬೆನ್ನಲ್ಲೇ ತಡರಾತ್ರಿ ಸಿಎಂ ಭೇಟಿಯಾದ ಬಿಜೆಪಿ ಶಾಸಕ: ಕುತೂಹಲ ಕೆರಳಿಸಿದ...

ಕಾಂಗ್ರೆಸ್ ಗೆ ಹೋಗಲ್ಲ ಎಂದ ಬೆನ್ನಲ್ಲೇ ತಡರಾತ್ರಿ ಸಿಎಂ ಭೇಟಿಯಾದ ಬಿಜೆಪಿ ಶಾಸಕ: ಕುತೂಹಲ ಕೆರಳಿಸಿದ ನಡೆ

ಬೆಂಗಳೂರು: ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ ಮರುದಿನವೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ನಡುವೆ ಈ ಬೆಳವಣಿಗೆ ನಡೆದಿದ್ದು, ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದರು. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಹೆಬ್ಬಾರ್ ತಡರಾತ್ರಿ ಸಿಎಂ ಭೇಟಿಯಾಗಿ ಸುಧೀರ್ಘ ಚರ್ಚೆ ನಡೆಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಹೆಬ್ಬಾರ್ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ ಎನ್ನಲಾಗಿದ್ದರೂ, ತಡರಾತ್ರಿ ಭೇಟಿ ಹಿಂದೆ ಅವರು ಕಾಂಗ್ರೆಸ್ ಸೇರುವ ಕುರಿತಾದ ಚರ್ಚೆ ನಡೆದಿರಬಹುದು ಎಂದು ಹೇಳಲಾಗಿದೆ.

ಈ ಹಿಂದೆ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular