alex Certify ಉದ್ಯೋಗ ವಾರ್ತೆ : ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೆ 8 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವರ್ಗಾವಣೆ ನಂತ್ರ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ತಾತ್ಕಾಲಿಕವಾಗಿ 8,000 ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ ನೇಮಕ ಮಾಡಿಕೊಳ್ಳೋದಕ್ಕೆ ಆದೇಶಿಸಿದ್ದಾರೆ.

ಹೆಚ್ಚುವರಿಯಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾದ 200 ಅತಿಥಿ ಶಿಕ್ಷಕರ ಹುದ್ದೆಗಳಲ್ಲಿ ಉಲ್ಲೇಖ 04 ರ ವಿಡೀಯೋ ಸಂವಾದ ಮೂಲಕ ನಡೆದ ಸಭೆಯಲ್ಲಿ ಜಿಲ್ಲಾ ಉಪನಿರ್ದೇಶಕರುಗಳು ನೀಡಿರುವ ಹೇಳಿಕೆಯ ಬೇಡಿಕೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಟ್ಟು 1912 ಹುದ್ದೆಗಳನ್ನು ಉಲ್ಲೇಖ 12 ರ ಜ್ಞಾಪನದಲ್ಲಿ ವಿಧಿಸಲಾದ ಷರತ್ತುಗಳ ಜೊತೆಗೆ ಕೆಳಕಂಡ ಷರತ್ತುಗಳನ್ನು ಸಹ ಪಾಲಿಸಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರು ಹಂಚಿಕೆ ಮಾಡಿ ಆದೇಶಿಸಿದೆ.

ಈ ಕೆಳಕಂಡ ಶಾಲೆಗಳಲ್ಲಿನ ಖಾಲಿ ಹುದ್ದೆಗೆ ಆದ್ಯತೆ ನೀಡುವುದು.

1. ತಾಲ್ಲೂಕಿನಲ್ಲಿನ ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ(ಪಿಟಿಆರ್) ಹೊಂದಿರುವ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ  ತಾಲ್ಲೂಕಿನಲ್ಲಿ ವರ್ಗಾವಣೆ ನಂತರ ಅತಿ ಕಡಿಮೆ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಗೆ
ಚುನಾಯಿತ ಪ್ರತಿನಿಧಿ ಅಥವಾ ಗ್ರಾಮ ಪಂಚಾಯತ್ ಸದಸ್ಯರನ್ನು ಅತಿಥಿ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ,

2. ತಾಲ್ಲೂಕುವಾರು ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕಾತಿಗಾಗಿ ಮಂಜೂರಾತಿ ನೀಡಿರುವ ಅತಿಥಿ ಶಿಕ್ಷಕರನ್ನು ಸಂಬಂಧಿಸಿದ ತಾಲ್ಲೂಕಿನ ಒಳಗೆ ಕಡ್ಡಾಯವಾಗಿ ಆದ್ಯತೆ ಮೇರೆಗೆ ಬಳಸಿಕೊಳ್ಳುವುದು ಎಂದು ಸೂಚನೆ ನೀಡಲಾಗಿದೆ

3 ) ಶಿಕ್ಷಕರ ಹುದ್ದೆಗಳಿಗೆ ಪ್ರಸ್ತುತ ಶಿಕ್ಷಕರ ವರ್ಗಾವಣೆಯಿಂದ ಭರ್ತಿಯಾಗಿದ್ದಲ್ಲಿ ತಕ್ಷಣ ಸದರಿ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡತಕ್ಕದ್ದು.ತಾಲ್ಲೂಕಿನ ಒಳಗೆ ಹೆಚ್ಚುವರಿಯಾಗುವ ಅತಿಥಿ ಶಿಕ್ಷಕರ ಹುದ್ದೆಗಳನ್ನು ಅನುಬಂಧದಲ್ಲಿ ಕಾಲಮ್ 8 ರಲ್ಲಿ ಹಂಚಿಕೆ ಮಾಡಿ: ಮಂಜೂರಾತಿ ನೀಡಿರುವಂತೆ ಕೊರತೆ ಇರುವ ತಾಲ್ಲೂಕುಗಳಿಗೆ ಮರು ಹೊಂದಾಣಿಕೆ ಮಾಡತಕ್ಕದ್ದು.

4) ಈಗಾಗಲೇ ಕೆಲವು ಜಿಲ್ಲೆಗಳ ಉಪನಿರ್ದೇಶಕರು ಹೆಚ್ಚುವರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಜಿಲ್ಲೆಗೆ ಅವಶ್ಯಕತೆ ಇಲ್ಲವೆಂದು ಈ ಕಛೇರಿಗೆ ಅದ್ಯರ್ಪಿಸಿರುವ ಹುದ್ದೆಗಳನ್ನು ಯಾವುದೇ ಕಾರಣಕ್ಕೂ ಪುನ: ಮರು ಹೊಂದಾಣಿಕೆ ಮಾಡಿಕೊಳ್ಳತಕ್ಕದ್ದಲ್ಲ. ಕಾರಣ ಸದರಿ ಹುದ್ದೆಗಳನ್ನು ಬೇರೆ ಅಗತ್ಯವಿರುವ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ,
ಈ ಮೇಲ್ಕಂಡಂತೆ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವರ್ಗಾವಣೆಯಿಂದ ಖಾಲಿಯಾಗಿರುವ ಸಹ ಶಿಕ್ಷಕರ ಒಟ್ಟು 8109 ಖಾಲಿ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು 6000+1912=7912 ಮಂಜೂರಾತಿ ನೀಡಿದ್ದು, ಸದರಿ ಹುದ್ದೆಗಳನ್ನು ಮೇಲ್ಕಂಡ ಷರತ್ತುಗಳಂತೆ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳಿಗೆ ಮಾತ್ರ ಒಂದು ವಾರದೊಳಗಾಗಿ ನೇಮಕಾತಿ ಮಾಡಿಕೊಂಡು, ವರ್ಗಾಯಿತ ಶಿಕ್ಷಕರನ್ನು ಬಿಡುಗಡೆಗೊಳಿಸತಕ್ಕದ್ದು, ಯಾವುದೇ ಗೊಂದಲ/ದೂರುಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ನೇಮಕ ಮಾಡಿಕೊಂಡು ಶೈಕ್ಷಣಿಕವಾಗಿ ಹಿನ್ನಡೆಯಾಗದಂತೆ ಕ್ರಮವಹಿಸುವುದು.

ಮರು ಹೊಂದಾಣಿಕೆ ಮಾಡಲಾದ ಅತಿಥಿ ಶಿಕ್ಷಕರ ತಾಲ್ಲೂಕು ಪಂಚಾಯಿತಿವಾರು ವಿವರಗಳನ್ನು ಹಾಗೂ 2 ನೇ ಹಂತದಲ್ಲಿ ನೇಮಕ ಮಾಡಿಕೊಳ್ಳಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪಾವತಿಸಲು ಅಗತ್ಯವಿರುವ ಅನುದಾನ ವಿವರಗಳನ್ನು ನಿಗದಿತ ನಮೂನೆಯಲ್ಲಿ ತುರ್ತಾಗಿ ಮಾಹಿತಿ ಸಲ್ಲಿಸಲು ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...